ಜಿಲ್ಲೆಬೆಳಗಾವಿರಾಜ್ಯ

ಚಿಕ್ಕೋಡಿ ಆಸ್ಪತ್ರೆಯ ಅವ್ಯವಸ್ಥೆಗೆ ಉಪಲೋಕಾ ನ್ಯಾಯಮೂರ್ತಿ ವೀರಪ್ಪ ಗರಂ!

ಚಿಕ್ಕೋಡಿ:
ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ನ್ಯಾ. ವೀರಪ್ಪ ಅವರು ಗುರುವಾರ(ಸೆ.24)
ಚಿಕ್ಕೋಡಿಯ ತಾಲೂಕು ಆಸ್ಪತ್ರೆಗೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕು ಆಸ್ಪತ್ರೆಯಲ್ಲಿನ ಔಷಧ ಮಳಿಗೆಯಲ್ಲಿ ಪುರುಷರಿಗೆ, ಮಹಿಳೆಯರಿಗೆ ಹಾಗೂ ವಿಕಲಚೇತನರಿಗಾಗಿ ಪ್ರತ್ಯೇಕವಾಗಿ ಜೌಷದ ವಿತರಣೆಗೆ ವ್ಯವಸ್ಥೆ ಮಾಡಲು ಸೂಚಿಸಿದರು. ವೈದ್ಯರು ಬರೆದುಕೊಡುವಂತಹ ಎಲ್ಲ ಔಷಧ, ಮಾತ್ರೆಗಳನ್ನು ನೀಡದೆ ಇರುವ ಕುರಿತು ಹಾಗೂ ಅವಧಿ‌ಮೀರಿದ ಜೌಷಧ ವಿತರಿಸುತ್ತಿರುವುದನ್ನು ಗಮನಿಸಿ ಆಕ್ಷೇಪ ವ್ಯಕ್ತಪಡಿಸಿದರು. ಆಸ್ಪತ್ರೆಗೆ ಆಗಮಿಸಿದಂತಹ ರೋಗಿಗಳೊಂದಿಗೆ ಮಾತನಾಡಿದ ಅವರು ಆಸ್ಪತ್ರೆಯಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡರು.

ತಾಲೂಕು ಆಸ್ಪತ್ರೆಯ ರಕ್ತ ಭಂಡಾರ, ಜೌಷಧ ಉಗ್ರಾಣ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ತಾಲೂಕು ಆಸ್ಪತ್ರೆಯು ಅವ್ಯವಸ್ಥೆಗಳ ಆಗರವಾಗಿದ್ದು ಇದನ್ನು ಸರಿಪಡಿಸಿ ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ ನೀಡಿ
ಆಸ್ಪತ್ರೆ ಸ್ವಚ್ಚತೆ ಹಾಗೂ ನಿರ್ವಹಣೆಗೆ ಸರಕಾರದಿಂದ ಅನುದಾನ ಒದಗಿಸಲಾಗುತ್ತಿದ್ದರು ಸಹ ಆಸ್ಪತ್ರೆಯನ್ನು ಸಮರ್ಪಕವಾಗಿ ನಿರ್ವಹಣೆಯಾಗದೆ ಇರುವ ಕುರಿತು ಅಸಮಾಧಾನ ವ್ಯಕ್ತ ಪಡಿಸಿ ಕೂಡಲೆ ಆಸ್ಪತ್ರೆಯ ಸ್ವಚ್ಚತೆ ಹಾಗೂ ಸಮರ್ಪಕ ನಿರ್ವಹಣೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಅರವಿಂದ, ಜಿಲ್ಲಾ‌ ಕಾನೂನಹ ಸೇವೆಗಳ‌ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಕುಮಾರ, ಲೋಕಾಯುಕ್ತ ಎಸ್.ಪಿ. ಪ್ರಸನ್ ದೇಸಾಯಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪ ವಿಭಾಗಾಧಿಕಾರಿ ಎಸ್.ಎಸ್.ಸಂಪಗಾವಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವು ಬಂಗಾರಪ್ಪನವರ, ತಹಶೀಲ್ದಾರ ಆರ್.ಆರ್.ಬುರ್ಲಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಗಡಾದ ಉಪಸ್ಥಿತರಿದ್ದರು.

TV24 News Desk
the authorTV24 News Desk

Leave a Reply

error: Content is protected !!