ಜಿಲ್ಲೆರಾಜ್ಯ

ಮಂಡ್ಯ ಜಿಲ್ಲೆ ಹುಲಿಕೆರಿ ಗ್ರಾಪಂ ಕಚೇರಿಯ ನೌಕರನ ಮೇಲೆ ಹಲ್ಲೆ ಖಂಡಿಸಿದ ರಾಜ್ಯಾಧ್ಯಕ್ಷ ಮಹಾಂತೇಶ ಖೋತ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕ ಹುಲಿಕೆರಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನೌಕರನಾದ ಶ್ರೀ ನವೀನ ಕುಮಾರ ಅವರ ಮೇಲೆ ಹಲ್ಲೆ ಖಂಡಿಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ರಾಜ್ಯಾಧ್ಯಕ್ಷ್ಯ ಮಹಾಂತೇಶ ಖೋತ ಒತ್ತಾಯ

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಸಣ್ಣಪುಟ್ಟ ಕಾರಣಗಳಿಗಾಗಿ ಅಥವಾ ಕಾನೂನುಬಾಹಿರ ಬೇಡಿಕೆಗಳು ಈಡೇರಲಿಲ್ಲ ಎಂಬ ಕಾರಣಕ್ಕೆ ಈ ಸಿಬ್ಬಂದಿಗಳ ಮೇಲೆ ದೈಹಿಕ ಮತ್ತು ಮಾನಸಿಕ ಹಲ್ಲೆ ನಡೆಸುತ್ತಿರುವುದು ಅತ್ಯಂತ ಖಂಡನೀಯ.ಸರಕಾರಿ ನೌಕರರ ಮೇಲೆ ಹಲ್ಲೆ ಮಾಡುವುದು ಕೇವಲ ವ್ಯಕ್ತಿಯ ಮೇಲಿನ ಹಲ್ಲೆಯಲ್ಲ.ಅದು ಕಾನೂನು ಮತ್ತು ವ್ಯವಸ್ಥೆಯ ಮೇಲಿನ ಹಲ್ಲೆಯಾಗಿದೆ. ಇಂತಹ ಕೃತ್ಯಗಳಿಂದಾಗಿ ಸಿಬ್ಬಂದಿಗಳು ಭಯದ ವಾತಾವರಣದಲ್ಲಿ ಕೆಲಸ ಮಾಡಬೇಕಾಗುತ್ತದೆ, ಇದು ಇಡೀ ಗ್ರಾಮದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ.ನಮ್ಮಲ್ಲಿ ಯಾವುದೇ ಅಸಮಾಧಾನವಿದ್ದರೂ ಅದನ್ನು ಕಾನೂನಿನ ಚೌಕಟ್ಟಿನಲ್ಲಿ, ಮೇಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕೇ ಹೊರತು ಕೈಗೆ ಕಾನೂನು ತೆಗೆದುಕೊಳ್ಳಬಾರದು. ಸಿಬ್ಬಂದಿಗೆ ರಕ್ಷಣೆ ನೀಡುವುದು ಮತ್ತು ಅವರ ಕೆಲಸಕ್ಕೆ ಸಹಕರಿಸುವುದು ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ನಮ್ಮೆಲ್ಲರ ಕರ್ತವ್ಯವಾಗಿದೆ.ಹಲ್ಲೆಕೋರನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ನೌಕರರಿಗೆ ಮುಕ್ತವಾಗಿ, ಧೈರ್ಯವಾಗಿ ಕೆಲಸ ಮಾಡಲು ಸೂಕ್ತ ರಕ್ಷಣೆ ಸಿಗಬೇಕೆಂದು ಹಾಗೂ ಪ್ರಕರಣವನ್ನು ದಾಖಲಿಸಿಕೊಂಡು ಹಲ್ಲೆ ಮಾಡಿದವನನ್ನ ಕೂಡಲೇ ಬಂದಿಸಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಲೆಕ್ಕ ಸಹಾಯಕ ನೌಕರರ ಸಂಘದ ರಾಜ್ಯಾದ್ಯಕ್ಷ ಮಹಾಂತೇಶ ಖೋತ ಒತ್ತಾಯಿಸಿದರು.

TV24 News Desk
the authorTV24 News Desk

Leave a Reply

error: Content is protected !!