ಕ್ರೈಂಜಿಲ್ಲೆಬೆಳಗಾವಿಬೆಳಗಾವಿ ನಗರರಾಜ್ಯ

ಯುವಕನ ಮೇಲೆ ಪೊಲೀಸರ ಉತ್ತರನ ಪೌರುಷ!ಸಾರ್ವಜನಿಕರ ಆಕ್ರೋಶ!

ಚಿಕ್ಕೋಡಿ: ಗಣೇಶ ದರ್ಶನಕ್ಕೆ ತೆರಳಿ ಮನೆಗೆ ವಾಪಸ್ ತೆರಳುತ್ತಿದ್ದ ಯುವಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸಂಕೇಶ್ವರದಲ್ಲಿ ಕೇಳಿಬಂದಿದೆ.
ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆಯುತ್ತಿರುವ ನೀಲಗಾರ ಗಣಪತಿ ದರ್ಶನದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಂಕೇಶ್ವರ ಪೊಲೀಸರ ವಿರುದ್ಧ ಯುವಕನ ಕುಟುಂಬಸ್ಥರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಣೇಶ ದರ್ಶನ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದವರನ್ನು ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಯುವಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಯುವಕನ ಬೆನ್ನು ಹಾಗೂ ತೋಳಿನ ಭಾಗಕ್ಕೆ ಲಾಠಿಯಿಂದ ಹೊಡೆದಿರುವುದಾಗಿ ಕುಟುಂಬಸ್ಥರು ದೂರಿದ್ದಾರೆ. ಘಟನೆಯ ಬಳಿಕ ಯುವಕನ ಕುಟುಂಬಸ್ಥರು ಹಾಗೂ ಸ್ಥಳೀಯರು ಸಂಕೇಶ್ವರ ಪೊಲೀಸ್ ಠಾಣೆಯ ಎದುರು ಧರಣಿ ನಡೆಸಿ, ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಂಕೇಶ್ವರ ನೀಲಗಾರ ಗಣಪತಿ ವೀಕ್ಷಣೆಗೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ಇದೇ ಸಂದರ್ಭದಲ್ಲಿ ಯುವಕನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಪೊಲೀಸರು ಯಾವ ಕಾರಣಕ್ಕೆ ಯುವಕನನ್ನು ಕರೆದು ವಿಚಾರಣೆ ನಡೆಸಿದರು, ಹಲ್ಲೆ ನಡೆದ ಸಂದರ್ಭ ಏನು ಸಂಭವಿಸಿತು ಹಾಗೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ನಿಲುವು ಏನು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಘಟನೆ ಕುರಿತು ಕುಟುಂಬಸ್ಥರು ಹಾಗೂ ಸ್ಥಳೀಯರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಯುವಕನಿಗೆ ಹಲ್ಲೆ ನಡೆಸಿದ ಸಿಬ್ಬಂದಿ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸದ್ಯ ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದ್ದು, ಪೊಲೀಸ್ ಇಲಾಖೆ ಘಟನೆ ಕುರಿತು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

TV24 News Desk
the authorTV24 News Desk

Leave a Reply

error: Content is protected !!