


ಬೆಳಗಾವಿ;
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನಿಪ್ಪಾಣಿ ತಹಶೀಲ್ದಾರ್ ಸುರೇಶ ಮುಂಜೆ ಅವರ ಪತ್ನಿ ಸ್ವಾತಿ ಅವರ ತವರು ಮನೆಯ ಮೇಲೂ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಬಸು ಬಾಳಪ್ಪ ಹಂದಿಗುಂದ ಅವರ ಮನೆ ಹಾಗೂ ಅವರು ಸಂಬಂಧ ಹೊಂದಿರುವ ಶ್ರೀ ನಾಗಲಿಂಗೇಶ್ವರ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ದಾಳಿ ವೇಳೆ ಮನೆ ಹಾಗೂ ಸೊಸೈಟಿಯಲ್ಲಿ ದಾಖಲೆಗಳು ಮತ್ತು ವಿವಿಧ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ಯಾವ ಪ್ರಕರಣಕ್ಕೆ ಸಂಬಂಧಿಸಿದೆ, ಯಾವ ದಾಖಲೆಗಳು ಅಥವಾ ಆಸ್ತಿಗಳ ಕುರಿತು ಪರಿಶೀಲನೆ ನಡೆಯುತ್ತಿದೆ ಹಾಗೂ ದಾಳಿಯಲ್ಲಿ ಏನೇನು ಪತ್ತೆಯಾಗಿದೆ ಎಂಬುದರ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.









