

ಬೆಳಗಾವಿ:
ಬೆಳಗಾವಿಯಲ್ಲಿ ಮಾಂಜಾ ದಾರಕ್ಕೆ ಯುವಕನೋರ್ವ ಮೃತಪಟ್ಟಿರುವ ವಿಚಾರದ ಕುರಿತು ಪ್ರತಕ್ರಿಯೇ ನೀಡಿದ ಪಾಲಿಕೆ ಮೇಯರ್ ಪ್ರೀತಿ ಕಾಮಕರ್
ಮಾಂಜಾ ದಾರದಿಂದ ದ್ರುವ ಎಂಬ ಯುವಕ ಮೃತಪಟ್ಟಿರುವುದು ಅತ್ಯಂತ ನೋವಿನ ಘಟನೆ. ಇಂತಹ ಘಟನೆಗಳು ಮರುಕಳಿಸದಂತೆ ಮಾಂಜಾ ದಾರದ ಮಾರಾಟ ಮತ್ತು ಬಳಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಪ್ರೀತಿ ಕಾಮಕರ್ ತಿಳಿಸಿದ್ದಾರೆ.
ಅಂಗಡಿಗಳಲ್ಲಿ ಮಾಂಜಾ ದಾರವನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಅಂಗಡಿಗಳ ತಪಾಸಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಮಾಂಜಾ ದಾರದ ಮಾರಾಟವನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯಿಂದ ಸಭೆ ನಡೆಸಿ ಮುಂದಿನ ಕ್ರಮಗಳ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಭರವಸೆ ನೀಡಿದ್ದಾರೆ.
ಇದೇ ವೇಳೆ, ಮಾಂಜಾ ದಾರಕ್ಕೆ ಬಲಿಯಾದ ದ್ರುವನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳುವುದಾಗಿಯೂ ಮೇಯರ್ ಪ್ರೀತಿ ಕಾಮಕರ್ ತಿಳಿಸಿದ್ದಾರೆ.
ಮಾಂಜಾ ದಾರದಿಂದ ಮತ್ತಷ್ಟು ಅನಾಹುತಗಳು ಸಂಭವಿಸದಂತೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳುವುದಾಗಿ ಮೇಯರ್ ಹೇಳಿದ್ದಾರೆ.







