ಬೆಳಗಾವಿ: ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಸರೀಕಟ್ಟಿ ಗ್ರಾಮದಲ್ಲಿ ನಡೆದಿದೆ.ಲಕ್ಷ್ಮಣ ದಿಲೀಪ ನಾಗರೋಳಿ ( 32) ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಯುವಕ. ಎರಡು ದಿನಗಳಿಂದ ಮನೆಗೆ ಬಂದಿರಲಿಲ್ಲ ಎಂದು ಆತಂಕಗೊಂಡ ಆತನ ಪತ್ನಿ ಮತ್ತು ತಾಯಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಿದ್ದರು. ಆದರೆ ಗುರುವಾರ ಅವರ ಜಮೀನಿನ ಬಾವಿಯಲ್ಲಿ ಈತನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಮಾರಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಶವವನ್ನು ಹೊರಗೆ ತೆಗೆಯಲಾಗಿದೆ. ಮೃತ ಯುವಕ ಪತ್ನಿ, ತಾಯಿ, ಓರ್ವ ಪುತ್ರ, ಇಬ್ಬರು ಪುತ್ರರಿದ್ದಾರೆ. ಈ ಸಂಬಂಧ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
tv24plus.in > Blog > ಜಿಲ್ಲೆ > ಬೆಳಗಾವಿ > ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ