ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರ್ನಾಟಕ ಸಾರಿಗೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಕ್ಯಾತೆ ತೆಗದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ನಮ್ಮ ಭಾರತ ರಾಜ್ಯಗಳಿಂದ ಕೂಡಿರುವ ಅಖಂಡ ಪ್ರಜಾಪ್ರಭುತ್ವ ದೇಶವಾಗಿದೆ. ಕಾನೂನು ಎಲ್ಲರಿಗೂ ಒಂದೇ ಗಲಾಟೆ ಮಾಡಿದವರ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಕೂಡಲೇ ಕ್ರಮ ಕೈಗೊಳ್ಳಬೇಕು. ನಮ್ಮ ರಾಜ್ಯದ ಗಡಿ ಜನರನ್ನು ಉಳಿಸಿಕೊಳ್ಳುತ್ತೇವೆ. ಪ್ರಕರಣ ಸುಪ್ರೀಂಕೋರ್ಟ್ ಇತ್ಯರ್ಥ ಮಾಡಲಿದೆ ಎಂದರು.
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ಸಾರ್ವಜನಿಕ ಪ್ರತಿಭಟನೆ, ಜೈ ಮಹಾರಾಷ್ಟ್ರ ಎಂದು ಬರೆದರು.
tv24plus.in > Blog > ರಾಜ್ಯ > ಸಿಎಂ ಬೊಮ್ಮಾಯಿ ಗರಂ:ಪುಂಡಾಟಿಕೆ ನಡೆಸಿದವರ ವಿರುದ್ಧ ಮಹಾ ಸಿಎಂ ಕ್ರಮ ಕೈಗೊಳ್ಳಲಿ….!







