ದೇಶ

ಕಾಂಗ್ರೆಸ್ ಚುನಾವಣಾ ರ‍್ಯಾಲಿ ವೇಳೆ ನುಗ್ಗಿದ ಗೂಳಿ..!

ಅಹಮದಾಬಾದ್: ಗುಜರಾತ್​ನಲ್ಲಿ ಚುನಾವಣೆಗೂ ಮುನ್ನ ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಗುಜರಾತ್ ಚುನಾವಣೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಭಾಷಣ ಮಾಡುತ್ತಿದ್ದಾಗ ಗೂಳಿಯೊಂದು ಆ ಸ್ಥಳಕ್ಕೆ ನುಗ್ಗಿದೆ. ಗುಜರಾತ್‌ನ ಮೆಹ್ಸಾನಾದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಚುನಾವಣಾ ರ‍್ಯಾಲಿ ಇತ್ತು. ಈ ವೇಳೆ ಗೂಳಿಯೊಂದು ಸಭೆಯ ಮಧ್ಯದಲ್ಲಿ ನುಗ್ಗಿತು. ಈ ಬಗ್ಗೆ ಬಿಜೆಪಿಗೆ ಹಿಡಿಶಾಪ ಹಾಕಿರುವ ಅಶೋಕ್ ಗೆಹ್ಲೋಟ್, ನಾನು ಚಿಕ್ಕಂದಿನಿಂದಲೂ ಕಾಂಗ್ರೆಸ್ ಸಭೆ ನಡೆದಾಗಲೆಲ್ಲ ಈ ಬಿಜೆಪಿಗರು ಗೂಳಿ, ಹಸುಗಳನ್ನು ಬಿಡುವುದನ್ನು ನೋಡುತ್ತಿದ್ದೇನೆ ಎಂದಿದ್ದಾರೆ. ಇದು ಬಿಜೆಪಿಯ ಷಡ್ಯಂತ್ರ ಎಂದು ಬಿಜೆಪಿಯನ್ನು ಗುರಿಯಾಗಿಸಿಕೊಂಡು ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.
TV24 News Desk
the authorTV24 News Desk

Leave a Reply