Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಧಾರವಾಡ

 ಸೆಲ್ಪಿ ಹುಚ್ಚಾಟಕ್ಕೆ ಮರ್ಮಾಂಗ ಸುಟ್ಟುಕೊಂಡ ವಿದ್ಯಾರ್ಥಿ 

ಹುಬ್ಬಳ್ಳಿ : ಇತ್ತೀಚಿನ ದಿನಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವುದು ಫ್ಯಾಷನ್ ಆಗಿದೆ. ಆದರೆ ಸೆಲ್ಫಿ ತೆಗೆದುಕೊಳ್ಳುವಾಗ ಕೆಲವು ಜನ ಪ್ರಪಂಚವನ್ನೇ ಮರೆತು ಬಿಡುತ್ತಾರೆ. ತಮ್ಮ ಸುತ್ತಮುತ್ತಲಿನಲ್ಲಿ ಏನಿದೆ, ಯಾರಿದ್ದಾರೆ, ಏನು ನಡೆಯುತ್ತಿದೆ ಎಂಬುದರ ಅರಿವೆ ಇರುವುದಿಲ್ಲ. ಇದರಿಂದ ತಮ್ಮ ಜೀವಕ್ಕೆ ಅಪಾಯ ತಂದುಕೊಂಡವರು ಅನೇಕ ಮಂದಿ ಇದ್ದಾರೆ. ಇದೀಗ ಅಂತಹದೇ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
ವಿದ್ಯುತ್ ಚಾಲಿತ ರೈಲುಗಳು ಸಂಚರಿಸುವ ಇಲ್ಲಿಯ ಶಿರಡಿನಗರದ ರೈಲು ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನಿಗೆ ವಿದ್ಯುತ್ ತಗುಲಿ ಮರ್ಮಾಂಗಕ್ಕೆ ತೀವ್ರತರ ಗಾಯವಾದ ಘಟನೆ  ನಡೆದಿದೆ. ನಗರದ ವಿನಾಯಕ ಎಂಬಾತನೇ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಸದ್ಯ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದ್ದು, ರೈಲ್ವೆ ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳುವ ಸಮಯದಲ್ಲಿ ಈ ಘಟನೆ ನಡೆದಿದೆ. ಸೆಲಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ.  ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!