ಬೆಳಗಾವಿ

ಭೀಕರ ಅಪಘಾತ :ಸ್ಥಳದಲ್ಲೇ ಸಾವನ್ನಪ್ಪಿದ  ಅಣ್ಣಾ – ತಂಗಿ

ಬೆಳಗಾವಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಣ್ಣ, ತಂಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಬಳಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ-18 ರಲ್ಲಿ ನಡೆದಿದೆ. ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಅಣ್ಣ, ತಂಗಿ ಸಾವನ್ನಪ್ಪಿದ್ದು, ಮತ್ತೊಂದು ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ಅಡಿವೆಪ್ಪ ಬಡಿಗೇರ (34), ಭಾಗ್ಯಶ್ರೀ ನವಿನ್ ಕಂಬಾರ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಗೋಕಾಕದ ಉಮರಾಣಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TV24 News Desk
the authorTV24 News Desk

Leave a Reply