ಧಾರವಾಡ

ಬೆಳಗಾವಿ ಅಧಿವೇಶನಕ್ಕೆ ಕುಮಾರಸ್ವಾಮಿ ಗೈರು ….? 

ಹುಬ್ಬಳ್ಳಿ:   ಈಗಾಗಲೇ ಜಾತ್ಯಾತೀತ ಜನತಾದಳ ವತಿಯಿಂದ ಸಾಕಷ್ಟು ಚುನಾವಣೆ ತಯಾರಿ ‌ನಡೆಸಲಾಗುತ್ತಿದೆ.ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕುಮಾರಸ್ವಾಮಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪಂಚರತ್ನ ಸಮಾವೇಶವನ್ನು ನಡೆಸಲಾಗುತ್ತಿದ್ದು ಉತ್ತಮ ಪ್ರತಿಕ್ರಿಯೆ ಜನರಿಂದ ಬಂದಿದೆ . ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ನಡೆಸಲಾಗುತ್ತದೆ. ಕೇಲವೇ ದಿನಗಳಲ್ಲಿ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆಸಲಾಗುತ್ತದೆ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ 
 ಚಳಿಗಾಲದ  ಅಧಿವೇಶನದಲ್ಲಿ ನಾನು ಭಾಗವಹಿಸಿಲ್ಲ. ಈಗಾಗಲೇ ನಿರ್ಧಾರ ಮಾಡಿದ್ದು ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲ್ಲ ಏಕೆಂದರೆ ಪಕ್ಷದ ವತಿಯಿಂದ ಪಂಚರತ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದರಿಂದಾಗಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲ್ಲ ಪೆಬ್ರವರಿ ತಿಂಗಳಲ್ಲಿ ಉತ್ತರ ಕರ್ನಾಟಕದಲ್ಲಿಯೂ  ಪಂಚರತ್ನ ಸಮಾವೇಶವನ್ನುಆರಂಭ ಮಾಡುತ್ತೆವೆ. ಎಂದ ಅವರು ಅಧಿವೇಶನದಲ್ಲಿ ನಮ್ಮ ಪಕ್ಷದ ಹಿರಿಯ ಶಾಸಕರಾದ ಬಂಡೆಪ್ಪ ಕಾಶಂಪುರ ಅವರು ನನ್ನ ಪರವಾಗಿ ಭಾಗವಹಿಸುತ್ತಾರೆ ಎಂದರು.
TV24 News Desk
the authorTV24 News Desk

Leave a Reply