ಬೆಂಗಳೂರು : ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
tv24plus.in > Blog > ರಾಜ್ಯ > ಇನ್ನು ಮೂರು ದಿನ ರಾಜ್ಯದಲ್ಲಿ ಚಳಿ ಸಹಿತ ಮಳೆ






