ರಾಜ್ಯ

ಶೀಘ್ರದಲ್ಲಿ ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸಂಪುಟದಲ್ಲಿ ಸ್ಥಾನ..?  

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.ಅಂದೇ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ.
ವಿಧಾನಸಭೇ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಿಂದ ಕೈಬಿಡಲಾಗಿದ್ದ ನಾಯಕರನ್ನು ಮತ್ತೆ ಸಂಪುಟಕ್ಕೆ ಸೇರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಮಾಜಿ ಸಚಿವರಾದ ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
TV24 News Desk
the authorTV24 News Desk

Leave a Reply