Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

ಚಿಕ್ಕೋಡಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿ 

ಚಿಕ್ಕೋಡಿ :ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ವಿಚಾರ ಈ ಬಾರಿ ಚಳಿಗಾಲದ ಅಧಿವೇಶನದಲ್ಲಿ ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ಅಧಿವೇಶ ಮುಗಿಯುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕೋಡಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಆಗ್ರಹಿಸಿದೆ.
ಡಿಸೆಂಬರ್ 15ರಂದು ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ಸರ್ಕಾರದ ಗಮನ ಸೆಳೆಯುವುದಲ್ಲದೇ ಡಿಸೆಂಬರ್ 19ರಿಂದ 29ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ನಿರಂತರ ಹೋರಾಟ ನಡೆಸುತ್ತೇವೆ ಎಂದು ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಚಿಕ್ಕೋಡಿ ಭಾಗದ ಜನರು ಪ್ರತಿಯೊಂದು ಕೆಲಸಕ್ಕೂ ಚಿಕ್ಕೋಡಿಯಿಂದ ಬೆಳಗಾವಿಯ ಕೇಂದ್ರ ಭಾಗಕ್ಕೆ ಬರಬೇಕು. ಜನಪ್ರತಿನಿಧಿಗಳೂ ಜನರ ಸಮಸ್ಯೆಗೆ ಗಮನಕೊಡುತ್ತಿಲ್ಲ. ಹಾಗಾಗಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಘೋಷಿಸಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು ಎಂಬುದು ಆಗ್ರಹಿಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!