ಬೆಂಗಳೂರು: ಸತತ ಒಂದು ವಾರದಿಂದ ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಆವರಿಸಿದ್ದು ಚಳಿ ಗಾಳಿಬೀಸುತ್ತಿದೆ. ರಾಜ್ಯದಲ್ಲಿ ನಾಲ್ಕು ದಿನಗಳು ಮಾಂಡೌಸ್ ಚಂಡಮಾರುತ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಲ್ಲಿಗೆ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಆವರಿಸಿದ್ದು ಚಳಿ ಗಾಳಿಬೀಸುತ್ತಿದೆ ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮಕ್ಕಳು, ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಆರೋಗ್ಯ ಇಲಾಖೆ ಬಿಡುಗಡೆ ಮಾಡುತ್ತಿರುವ ಸಲಹೆಗಳನ್ನು ಪಾಲಿಸಬೇಕೆಂದು ತಿಳಿಸಿದೆ.