ಗೋಕಾಕ: ಸುವರ್ಣ ವಿಧಾನಸೌಧಕ್ಕೆ ಕಾರ್ಯದರ್ಶಿ ಸಹಿತ ರಾಜ್ಯ ಸರ್ಕಾರದ ಉನ್ನತ ಇಲಾಖೆಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವರ್ಗಾಯಿಸಬೇಕೆಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ ನಿಂಗಯ್ಯಾಸ್ವಾಮಿ ಪೂಜಾರಿ ಆಗ್ರಹಿಸಿದ್ದಾರೆ.
ಈ ಮೂಲಕ ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರವನ್ನಾಗಿಸಬೇಕು. ಪ್ರಸಕ್ತ ವಿಧಾನಸಭೆ ಅಧಿವೇಶನದಲ್ಲಿಯೇ ಈ ಕುರಿತು ನಿರ್ಣಯ ತೆಗೆದುಕೊಳ್ಳಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.