Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಸಂಗೊಳ್ಳಿ ರಾಯಣ್ಣ ಪುತ್ತಳಿ ಅನಾವರಣಗೊಳಿಸಿದ ಮಾಜಿ ಸಿಎಂ  ಸಿದ್ದರಾಮಯ್ಯ

ಅಥಣಿ: ಪಟ್ಟಣದ ವಿಜಯಪೂರ ರಸ್ತೆಗೆ ಹೊಂದಿಕೊಂಡ ಮೂರ್ತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿದ್ದರಾಮಯ್ಯನವರು ರಾಯಣ್ಣನ ದೇಶಪ್ರೇಮ, ರಾಜನಿಷ್ಠೆಯನ್ನು ನಮ್ಮ ಯುವಜನತೆ ಮೈಗೂಡಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೊಡುಗೆಯನ್ನಾಗಿ ನೀಡಿದ ಬುಟಾಳಿ ಅವರ ಕೊಡುಗೆ ಈ‌ ನಾಡಿಗೆ ದೊಡ್ಡದು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಮಹಾರಾಷ್ಟ್ರಕ್ಕೆ ಒಂದಿಂಚೂ ಜಾಗ ಬಿಟ್ಟು ಕೊಡುವದಿಲ್ಲ. ಮಹಾಜನ ವರದಿಯೇ ಅಂತೀಮ ಸರ್ಕಾರ ಒಳ್ಳೆಯ ವಕೀಲರನ್ನ ನೇಮಿಸಿ ಮಹಾರಾಷ್ಟ್ರದ ಅರ್ಜಿ ಸರ್ವೋಚ್ಛ ನ್ಯಾಯಾಲಯದಲ್ಲಿ ವಜಾಗೊಳ್ಳುವಂತೆ ಸೂಚಿಸಿದರು. ಅದೇ ರೀತಿ ಈ ಭಾಗದಲ್ಲಿ ರೈತರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಆದರೆ ಸರ್ಕಾರ ರೈತರಿಗೆ ಯಾವದೇ ಬೆಳೆ ಪರಿಹಾರ ನೀಡದೇ ಮೋಸ ಮಾಡುತ್ತಿದೆ ಅದಷ್ಡೇ ಅಲ್ಲದೇ ಕಬ್ಬು ಮತ್ತು ದ್ರಾಕ್ಷಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ  ಸರ್ಕಾರ ಗಮನ ಹರಿಸುತ್ತಿಲ್ಲ. ರೈತರ ಬೆಳೆಗಳಿಗೆ ಹಾಯಿಸಲು ಕೇವಲ ಮೂರು ಗಂಟೆಗಳ ಕಾಲ ವಿದ್ಯುತ್ ನೀಡುತ್ತಿದೆ. ಅಲ್ಲದೇ ೨೦೧೯ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡು ಸಂಪೂರ್ಣ ಮನೆಗಳು ಬಿದ್ದರೂ ಸಹ ಸಿ ಶ್ರೆಣಿಯಲ್ಲಿ ಹಾಕಿ ಕುಟುಂಬಗಳಿಗೆ ಅನ್ಯಾಯ ಮಾಡಲಾಗಿದೆ ಇದನ್ನ ನಾನು ನಾಳೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.  
TV24 News Desk
the authorTV24 News Desk

Leave a Reply

error: Content is protected !!