Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

 ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನಕ್ಕೆ ಸಾಕ್ಷಿಯಾದ ಸುವರ್ಣ ಸೌಧದ 

ಬೆಳಗಾವಿ : ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಕ್ರೈಸ್ತ ವಸತಿ ಶಾಲೆಗಳ‌ ವಿದ್ಯಾರ್ಥಿನಿಯರಿಂದ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾಟೆ ಪ್ರದರ್ಶನ ವೀಕ್ಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಕೂಡ ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ. ಅದರ ಬಗ್ಗೆ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.ಆತ್ಮರಕ್ಷಣೆ ಪ್ರತಿ ನಾಗರಿಕನಿಗೆ ಅಗತ್ಯ.ನಾನು ಗೃಹ ಸಚಿವನಿದ್ದ ಸಂದರ್ಭದಲ್ಲಿ ಕೆಲವು ನಿರ್ಧಾರ ಗಳನ್ನು ತೆಗೆದುಕೊಂಡಿದ್ದು, ಆತ್ಮರಕ್ಷಣೆಗಾಗಿ ಕರಾಟೆ ತರಬೇತಿ ಯನ್ನು ಹೆಣ್ಣುಮಕ್ಕಳಿಗೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ವಸತಿ ಶಿಕ್ಷಣ ಸಂಸ್ಥೆ ಇದನ್ನು ಅಳವಡಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಕಳೆದ ಒಂದು ವರ್ಷದಲ್ಲಿ ತರಬೇತಿ ನೀಡಿರುವುದು ಶ್ಲಾಘನೀಯ ಎಂದರು.
TV24 News Desk
the authorTV24 News Desk

Leave a Reply

error: Content is protected !!