ಬೆಂಗಳೂರು:ಚೀನಾದಿಂದ ಬಂದ 35 ವರ್ಷದ ವ್ಯಕ್ತಿಯೊಬ್ಬನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆ ವೇಳೆಯಲ್ಲಿ 12 ಮಂದಿಗೆ ಪಾಸಿಟಿವ್ ವರದಿಯಾಗಿದೆ.. ಹೀಗಾಗಿ ರಾಜ್ಯದಲ್ಲಿ ಬಿಎಫ್ 7 ಒಮಿಕ್ರಾನ್ ಉಪತಳಿಯ ಆಂತಕ ಹೆಚ್ಚಾಗಿದೆ.
ಕಳೆದ ಮೂರು ದಿನಗಳಿಂದ ಕರೋನಾ ಹೈರಿಸ್ಕ್ ದೇಶಗಳಿಂದ ಬಂದ 12 ಜನರಲ್ಲಿ ಕೊರೋನಾ ದೃಢಪಟ್ಟಿದೆ. ಇವರಲ್ಲಿ ಐವರನ್ನು ಹೋಂ ಐಸೋಲೇಷನ್ ಮಾಡಲಾಗಿದ್ದರೇ, ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೀಗಾಗಿ ಈಗ ಬೆಂಗಳೂರಿನಲ್ಲಿಯೂ ಬಿಎಫ್.7 ಕೊರೋನಾ ಆತಂಕ ಹೆಚ್ಚಾಗಿದೆ.