Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿಬೆಳಗಾವಿ ನಗರ

 ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ

ಬೆಳಗಾವಿ:ಒಂದೆರಡು ಜೈಲು ಓಪನ್ ಮಾಡಬೇಕು, ಅದನ್ನ ನೀವೆ ಮಾಡಿ ನಮ್ಮನ್ನೇನು ಕರೆಯಿಸಬೇಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹಾಸ್ಯಚಟಾಕಿ ಮಾಡಿದರು. ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ವಾಹನ ಖರೀದಿ ಪೊಲೀಸ್ ‌ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.‌ ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ‌ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ.‌ ಡಿವೈಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುತ್ತಿದೆ ಎಂದರು.
TV24 News Desk
the authorTV24 News Desk

Leave a Reply

error: Content is protected !!