ದೇಶ

 ತಾಯಿಯ ಪಾರ್ಥಿವ ಶರೀರರಕ್ಕೆ  ಹೆಗಲು ಕೊಟ್ಟ  ಪ್ರಧಾನಿ ಮೋದಿ

ಅಹಮದಾಬಾದ:ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ಇಂದು ಬೆಳಗಿನ ಜಾವ 3.30ರ ಸುಮಾರಿಗೆ ನಿಧನರಾಗಿದ್ದಾರೆ. 100 ವರ್ಷದ ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಈಗಾಗಲೇ ಗಾಂಧಿನಗರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ತಾಯಿಯ ಅಂತಿಮ ದರ್ಶನ ಪಡೆದರು. ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಸಹೋದರರೊಂದಿಗೆ ತಾಯಿಯ ಪಾರ್ಥಿವ ಶರೀರರಕ್ಕೆ  ಹೆಗಲು ಕೊಟ್ಟು   ಸಾಗಿದ್ದಾರೆ.
ತಮ್ಮ ತಾಯಿಯ ನಿಧನದ ಬಗ್ಗೆ ಇಂದು ಮುಂಜಾನೆ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭವ್ಯವಾದ ಶತಮಾನವೊಂದನ್ನು ಕಳೆದ ನನ್ನ ತಾಯಿ ದೇವರ ಪಾದದ ಮೇಲೆ ಮಲಗಿದ್ದಾರೆ. ಅಮ್ಮನಲ್ಲಿ ನಾನು ಯಾವಾಗಲೂ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ. ಅವರದ್ದು ತಪಸ್ವಿಯ ಪ್ರಯಾಣ. ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ನಡೆಸಿದ ನನ್ನ ತಾಯಿ ನಮ್ಮನ್ನು ಅಗಲಿದ್ದಾರೆ. ಅಮ್ಮನ 100ನೇ ಹುಟ್ಟುಹಬ್ಬದಂದು ನಾನು ಅವರನ್ನು ಭೇಟಿಯಾದಾಗ ಬುದ್ಧಿವಂತಿಕೆಯಿಂದ ಕೆಲಸ ಮಾಡು, ಶುದ್ಧತೆಯಿಂದ ಜೀವನ ನಡೆಸು ಎಂದು ನನಗೆ ಹೇಳಿದ್ದರು ಎಂದು ಮೋದಿ ತಮ್ಮ ತಾಯಿಯ ಬಗ್ಗೆ ಟ್ವೀಟ್ ಮಾಡಿದ್ದರು.
TV24 News Desk
the authorTV24 News Desk

Leave a Reply