ಬೆಳಗಾವಿ

ಅಥಣಿ ASI ಆತ್ಮಹತ್ಯೆಗೆ ಶರಣು 

ಅಥಣಿ: ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಅಥಣಿ ಪೊಲೀಸ್‌ ಠಾಣೆ ಎಎಸ್‌ಐ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮಲಿಂಗ ನಾಯಕ್ (49) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಥಣಿ ಪೊಲೀಸ್‌ ಠಾಣೆಯ ಎಎಸ್‌ ಐ. ಇವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸದ್ಯ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಾರೂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
TV24 News Desk
the authorTV24 News Desk

Leave a Reply