ಬೆಳಗಾವಿ

ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ಪ್ರಾಣಾಪಾಯದಿಂದ ಪಾರು 

ಅಥಣಿ : ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಸೇರಿದಂತೆ 6 ಜನರು ಕಾರಿನಲ್ಲಿ ತಡರಾತ್ರಿ ತೆರಳುತ್ತಿದ್ದರು.ಲಾರಿಯೊಂದರ ಟೈಯರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ  ಪರಿಶೀಲನೆ ನಡೆಸಿದ್ದಾರೆ.
TV24 News Desk
the authorTV24 News Desk

Leave a Reply