ರಾಜ್ಯ

ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ: ಸಿದ್ದರಾಮಯ್ಯ

ಕೋಲಾರ : 2023ರ ಮುಂಬರುವ ವಿಧಾನಸಭಾ ಚುನಾವಣೆಗೆ ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು  ಕೋಲಾರ ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವುದು ಹೆಚ್ಚು ಕಡಿಮೆ ಖಚಿತವಾಗಿತ್ತು. ಈ ಕುರಿತಾಗಿ ಇಂದು ಕೋಲಾರ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಬಹಿರಂಗವಾಗಿ ಘೋಷಣೆ ಮಾಡಿದರು. ನಿಮ್ಮ ಪ್ರೀತಿ, ಅಭಿಮಾನವನ್ನು ತಿರಸ್ಕಾರ ಮಾಡಲು ಸಾಧ್ಯವಿಲ್ಲ. ನಾನು ಕೋಲಾರದಿಂದ ಸ್ಪರ್ಧಿಸಲು ತೀರ್ಮಾನ ಮಾಡಿದ್ದು, ಹೈಕಮಾಂಡ್​ ಸೂಚಿಸಿದರೆ ಕೋಲಾರದಿಂದ ಸ್ಪರ್ಧಿಸಲು ಸಿದ್ಧ. ನನ್ನ ಸ್ಪರ್ಧೆಗೆ ಹೈಕಮಾಂಡ್ ತೀರ್ಮಾನ ಕೂಡ ಬೇಕಾಗುತ್ತದೆ ಎಂದರು. ಅಹಿಂದ ಮತಗಳ ಮೇಲೆ ವಿಶ್ವಾಸವಿಟ್ಟು ಕ್ಷೇತ್ರ ಘೋಷಣೆ ಮಾಡಿದ್ರ ಸಿದ್ಧರಾಮಯ್ಯ ಎನ್ನುವ ಪ್ರಶ್ನೆಗಳು ಸಹ ಹುಟ್ಟಿಕೊಂಡಿವೆ.
ಯಾವುದೇ ತಪ್ಪು ಸಂದೇಶ ಹೋಗಬಾರದು. ನನ್ನ ಬಗ್ಗೆ ಕೆಲವರು ಅಪಪ್ರಚಾರ ಮಾಡಲು ಮುಂದಾಗುತ್ತಾರೆ. ಹೊರಗಡೆಯವರು ಜನರ ಕಷ್ಟ ಸುಖ ಕೇಳಲು ಆಗಲ್ಲ ಅಂತಾರೆ. ನಾನು ಪ್ರತಿ ವಾರ ಕೂಡ ಕೋಲಾರಕ್ಕೆ ಬರುತ್ತೇನೆ. ನೇರವಾಗಿ ಯಾರು ಬೇಕಾದರೂ ನನ್ನನ್ನು ಭೇಟಿ ಮಾಡಬಹುದು ಎಂದು ಸಿದ್ದರಾಮಯ್ಯ ಹೇಳಿದರು 
TV24 News Desk
the authorTV24 News Desk

Leave a Reply

error: Content is protected !!