ರಾಜ್ಯ

ಸ್ಯಾಂಟ್ರೊ ರವಿ ಬಂಧನಕ್ಕೆ 11 ವಿಶೇಷ ತಂಡ ರಚಿಸಿ ಹುಡುಕಾಟ 

ಬೆಂಗಳೂರು: ಮೈಸೂರು ಪೊಲೀಸರು ಸ್ಯಾಂಟ್ರೊ ರವಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನ ಬಂಧನಕ್ಕೆ 11 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ದೂರು ದಾಖಲಾದ ಬಳಿಕ ಸ್ಯಾಂಟ್ರೊ ರವಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರೆದಿದೆ. ಸ್ಯಾಂಟ್ರೊ ರವಿ ಬಂಧನದಿಂದ ತಪ್ಪಿಸಿಕೊಳ್ಳಲು ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
 ಸ್ಯಾಂಟ್ರೊ ರವಿ ಕರ್ನಾಟಕ ಬಿಟ್ಟು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರ ತಂಡ ಹೊರ ರಾಜ್ಯಗಳಲ್ಲಿ ಸಹ ಹುಡುಕಾಟ ನಡೆಸುತ್ತಿದೆ. ಕೇರಳ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಸಹ ಪೊಲೀಸರ ತಂಡ ಹುಡುಕಾಟ ಮುಂದುವರೆಸಿದೆ. ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ನೇತೃತ್ವದಲ್ಲಿ ಪೊಲೀಸರ ತಂಡಗಳು ಹುಡುಕಾಟ ನಡೆಸಿವೆ.
TV24 News Desk
the authorTV24 News Desk

Leave a Reply