ಸ್ಥಳ ನಿಯೋಜನೆ ಮಾಡದೆ ಡಿ.ರೂಪಾ, ರೋಹಿಣಿ ಸಿಂಧೂರಿ ವರ್ಗಾವಣೆ
ಬೆಂಗಳೂರು: ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಗಳಕ್ಕೆ ಸರಕಾರ ಬ್ರೇಕ ಹಾಕಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.
ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರ ಸ್ಥಾನಕ್ಕೆ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಲಾಗಿದ್ದು, ಡಿ.ರೂಪಾ ಅವರ ಸ್ಥಾನಕ್ಕೆ ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.











