ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತಾನ್ನಾಡಿ ಇದು ನನ್ನ ಕೊನೆಯ ಅಧಿವೇಶನ, ಮುಂದೆ ನಾನು ಬರಲ್ಲ, ಎಂದು ಭಾವುಕರಾಗಿ ನುಡಿದರು. ಬಜೆಟ್ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಮತ್ತೆ ನಾನು ಸದನದ ಒಳಗೆ ಬರುವ ಪ್ರಶ್ನೆಯೇ ಇಲ್ಲ ಎಂದು ದೃಢವಾಗಿ ಹೇಳಿದರು. ಈ ವೇಳೆ ಯಡಿಯೂರಪ್ಪ ತುಸು ಭಾವುಕರಾಗಿರುವುದು ಕಂಡುಬಂತು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿದು ಕೊನೆಯ ಭಾಷಣ ಎಂದು ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಅವರ ಮನವೊಲಿಸುವಂತೆ ಮಾತನಾಡಿದರು. ನೀವು ಹಿರಿಯ ನಾಯಕರು, ಮತ್ತೆ ಸದನ ಪ್ರವೇಶಿಸಬೇಕು ಎಂದರು.
tv24plus.in > Blog > ರಾಜ್ಯ > ಕೊನೆಯ ಅಧಿವೇಶನದಲ್ಲಿ ವಿದಾಯ ಭಾಷಣ ಮಾಡಿದ ಬಿಎಸ್‌ವೈ








