Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಟ್ರೆಂಡ್ದೇಶ

ಬಾಲಿವುಡ್‌ ನಟಿ ಸುಶ್ಮಿತಾ ಸೇನ್‌ಗೆ ಹೃದಯಾಘಾತ..!

ಮುಂಬೈ: ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದರು. ಇದನ್ನು ಸ್ವತಃ ಸುಶ್ಮಿತಾ ಸೇನ್  ಸೋಷಿಯಲ್‌ ಮೀಡಿಯಾದ ಮೂಲಕ ಬಹಿರಂಗಪಡಿಸಿದ್ದಾರೆ. ತಮಗೆ ಹೃದಯಾಘಾತವಾಗಿದ್ದು, ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಮತ್ತು ಸ್ಟೆಂಟ್ ಕೂಡ ಹಾಕಲಾಗಿದೆ ಎಂದು ಹೇಳಿದ್ದಾರೆ. ಇದೀಗ ಸುಶ್ಮಿತಾ ಸೇನ್ ಆರೋಗ್ಯ ಸ್ಥಿತಿ ತಿಳಿದು, ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದು, ಅಭಿಮಾನಿಗಳು ಕೊಂಚ ನಿರಾಳರಾಗಿದ್ದಾರೆ.
 
ಹೃದಯವನ್ನು ಲವಲವಿಕೆಯಿಂದ, ಸಂತೋಷದಿಂದ ಮತ್ತು ಧೈರ್ಯದಿಂದ ಇಟ್ಟುಕೊಳ್ಳಿ.. ಹಾಗಿದ್ದರೆ.. ಆಪತ್ಕಾಲದಲ್ಲಿ ಹೃದಯವು ನಿಮ್ಮೊಂದಿಗೆ ನಿಲ್ಲುತ್ತದೆ ಎಂದು ನನ್ನ ತಂದೆ ಹೇಳಿದರು. ಕೆಲವು ದಿನಗಳ ಹಿಂದೆ ನನಗೆ ಹೃದಯಾಘಾತವಾಗಿತ್ತು. ಆಂಜಿಯೋಪ್ಲಾಸ್ಟಿ ಮಾಡಲಾಯಿತು. ನಾನು ಅನೇಕರಿಗೆ ಧನ್ಯವಾದಗಳನ್ನು ಹೇಳಬೇಕು. ಅವರೆಲ್ಲರಿಗೂ ಇನ್ನೊಂದು ಪೋಸ್ಟ್‌ನಲ್ಲಿ ಹೇಳುತ್ತೇನೆ.ಸಂಪೂರ್ಣ ಆರೋಗ್ಯವಾಗಿದ್ದೇನೆ.. ಮತ್ತೆ ಶೂಟಿಂಗ್‌ನಲ್ಲಿ ಬ್ಯುಸಿಯಾಗಲು ರೆಡಿಯಾಗಿದ್ದೇನೆ ಎಂದು ಪೋಸ್ಟ ಮಾಡಿದ್ದಾರೆ. 
TV24 News Desk
the authorTV24 News Desk

Leave a Reply

error: Content is protected !!