ಹುಬ್ಬಳ್ಳಿ: ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ ಉದ್ಘಾಟನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಲಿದ್ದಾರೆ. ವಿಶ್ವದರ್ಜೆಯ ಪ್ಲಾಟ್ ಫಾರಂ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್ ಫಾರಂ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಹುಬ್ಬಳ್ಳಿ–ಧಾರವಾಡಕ್ಕೆ ಭೇಟಿ ನೀಡಿ ಹುಬ್ಬಳ್ಳಿಯಲ್ಲಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ
tv24plus.in > Blog > ಜಿಲ್ಲೆ > ಧಾರವಾಡ > ನಾಳೆ ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ
the authorTV24 News Desk
All posts byTV24 News Desk
Leave a reply







