ರಾಜ್ಯ

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ ನಟ ಚೇತನ್ ಬಂಧನ 

ಬೆಂಗಳೂರು: ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ ನಟ ಚೇತನ್ ಅರೆಸ್ಟ್​​ ಆಗಿದ್ದಾರೆ. ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು.ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡುವ ಕಾರ್ಯ ಆಗಿದೆ. ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಚೇತನ್ ಅವರನ್ನು ಅರೆಸ್ಟ್ ಮಾಡಲಾಗಿತ್ತು.
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B  ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಸದ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸರು ಎಫ್​ಐಆರ್ ದಾಖಲಿಸಿ ಬಂಧಿಸಿದ್ದಾರೆ.
TV24 News Desk
the authorTV24 News Desk

Leave a Reply