ಧಾರವಾಡ

ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ನೋ ಎಂಟ್ರಿ ಸುಪ್ರೀಂ ಕೋರ್ಟ್ …!  

ಹುಬ್ಬಳ್ಳಿ :  ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆದಲ್ಲಿ ಭಾಗಿಯಾದ ಆರೋಪದ ಮೇಲೆ  ಧಾರವಾಡ ಜಿಲ್ಲೆಯಿಂದ ಹೊರಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ  ಸುಪ್ರೀಂ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡಲು ನಿರಾಕರಿಸಿದೆ.
ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ವಿನಯ್ ಅವರು 9 ತಿಂಗಳ ಕಾಲ ಸೆರೆವಾಸ ಅನುಭವಿಸಿ ಇದೀಗ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಆದರೆ, ಇವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿತ್ತು. ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ವಿನಯ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಇದಕ್ಕೆ ಸುಪ್ರೀಂ ಕೋರ್ಟ್ ಅವಕಾಶ ನೀಡದೇ ಅರ್ಜಿಯನ್ನು ಇತ್ಯರ್ಥಗೊಳಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರುಸ್ತೋಗಿ ಹಾಗೂ ಬೇಲಾ ಎಂ. ಅವರಿದ್ದ ದ್ವಿಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ವಾರಕ್ಕೆ ಎರಡು ಬಾರಿ ಸಿಬಿಐ ಕಚೇರಿಗೆ ತೆರಳಿ ಸಹಿ ಹಾಕುವುದಕ್ಕೆ ಇದ್ದ ಆದೇಶವನ್ನು ಸಡಿಲಗೊಳಿಸಿರುವ ಕೋರ್ಟ್, ಪ್ರತಿ ತಿಂಗಳ ಮೊದಲ ಶನಿವಾರ ಮಾತ್ರ ಸಹಿ ಹಾಕಲು ಅವಕಾಶ ನೀಡಿದೆ.ಚುನಾವಣೆ ಬಂದಿದ್ದು, ವಿನಯ್ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ವಿನಯ್ ಪರ ವಕೀಲರಾದ ಸಿದ್ದಾರ್ಥ ಭಟ್ನಾಗರ ಅವರು ಕೋರ್ಟ್ ವಾದ ಮಂಡಿಸಿದರು. 
TV24 News Desk
the authorTV24 News Desk

Leave a Reply