Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ರಾಜ್ಯ

ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಡಿಕೆ.ಶಿವಕುಮಾರ

ಬೆಂಗಳೂರು : ಈ ಚುನಾವಣೆಯಲ್ಲಿ  ಬಿಜೆಪಿಯಿಂದ ಟಿಕೆಟ್‌ ವಂಚಿತರಾದ ಕೆಲವು ನಾಯಕರು ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್‌ಗೆ ಬರಲು ಒಪ್ಪಿಕೊಂಡರೆ ಅವರನ್ನು ನಾವು ಧಾರಾಳವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಹಾಗೂ ಅವರನ್ನು ಸ್ವಾಗತಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.
 
ದೆಹಲಿಯಿಂದ ವಾಪಸ್‌ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಬಾಕ್ಸಿಂಗ್ ಕುಸ್ತಿ ಗಲಾಟೆ ಜೋರಾಗಿ ನಡೆಯುತ್ತಿದೆ.  ನಾವು ಈಗಾಗಲೇ ಶೇಕಡ 75ರಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದೇವೆ.  ಉಳಿದ ಅಭ್ಯರ್ಥಿಗಳ ಪಟ್ಟಿಯನ್ನಯ ಶುಭ ಮುಹೂರ್ತದಲ್ಲಿ ಬಿಡುಗಡೆ ಮಾಡುತ್ತೇವೆ. ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ಆದರೆ, ಒಂದು ವೇಳೆ ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ಗೆ ಬರುವುದಾದರೆ ಅವರನ್ನು ನಾವು ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದರು.
TV24 News Desk
the authorTV24 News Desk

Leave a Reply

error: Content is protected !!