ಬೆಳಗಾವಿ

3,88,500 ನಗದು ಹಣ ವಶಕ್ಕೆ ಪಡೆದ ಅಧಿಕಾರಿಗಳು

ಹುಕ್ಕೇರಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 3,88,500 ನಗದು ಹಣವನ್ನು ಎಫ್ ಎಸ್ ಟಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೈರಾಪುರ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದೆ. ಕೊಲ್ಲಾಪುರದ ಜಮಾದಾರ ಎನ್ನುವ ವ್ಯಕ್ತಿಯು 3,88500 ನಗದು ಹಣವನ್ನು ಸಾಗಾಟ ಮಾಡುತ್ತಿದ್ದ ವೇಳೆಯಲ್ಲಿ ಬೈರಾಪೂರ ಚೆಕ್ ಪೋಸ್ಟ್ ನಲ್ಲಿ ತಪಾಸನೆ ನಡೆಸುತ್ತಿದ್ದ ಎಫ್ ಎಸ್ ಟಿ ಅಧಿಕಾರಿಗಳು ಹಾಗೂ ಪೊಲೀಸರು ಈ ವೇಳೆ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಸಂದರ್ಭದಲ್ಲಿ ಸಂಕೇಶ್ವರ ಸಿಪಿಐ ಪ್ರಹ್ಲಾದ ಚೆನ್ನಗೇರಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕುರಿತು ಸಂಕೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
TV24 News Desk
the authorTV24 News Desk

Leave a Reply