ರಾಜ್ಯ

 3ನೇ ಬಾರಿಗೆ ಮೋದಿ ಮೆಗಾ ರೋಡ್ ಶೋನಲ್ಲಿ ಬದಲಾವಣೆ

ಬೆಂಗಳೂರು: ನಗರದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಮೂರನೇ ಬಾರಿ ಬದಲಾವಣೆಯಾಗಿದ್ದು, ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ. ರೋಡ್ ಶೋ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಬದಲಿ ಮಾರ್ಗವನ್ನುಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾನುವಾರ ನೀಟ್ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪೊಲೀಸರಿಗೆ ತೋರಿಸಿದ್ದಲ್ಲಿ ಅವರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿಗಳು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.
10 ಲಕ್ಷಕ್ಕೂ ಹೆಚ್ಚು ಮಂದಿ ರೋಡ್ ಶೋನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಈ ಕಾರ್ಯಕ್ರಮವನ್ನು ವಿಫಲಗೊಳಿಸಲು ಕಾಂಗ್ರೆಸ್‍ನವರು ರೋಡ್ ಶೋ ಮಾರ್ಗದಲ್ಲಿ ಆ್ಯಂಬುಲೆನ್ಸ್‍ಗಳನ್ನು ಬಿಡಲು ಸಂಚು ರೂಪಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ ಪ್ರಧಾನಿ ಕಚೇರಿ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದ್ದು, ಭಾನುವಾರ ಬೆಳಗ್ಗೆ ಮುಂದೂಡಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿಯಾಗಿದೆ.
ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ಫಿಕ್ಸ್ ಮಾಡಲಾಗಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ರೋಡ್ ಶೋ ನಡೆಯಲಿದ್ದು, ಜೆ.ಪಿ.ನಗರದ ಬ್ರಿಗೇಡ್ ಮಿಲೇನಿಯಂನಿಂದ ರೋಡ್ ಶೋ ಆರಂಭವಾಗಲಿದೆ. ಮಲ್ಲೇಶ್ವರಂನ ಸರ್ಕಲ್ ಮಾರಮ್ಮ ದೇವಸ್ಥಾನದ ವರಗೆ ರೋಡ್ ಶೋ ಮಾಡಲಿದ್ದಾರೆ.
TV24 News Desk
the authorTV24 News Desk

Leave a Reply