ಬೆಳಗಾವಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದು ಸಮುದಾಯಕ್ಕೆ ಪ್ರತಿಷ್ಠಿತ ಹುದ್ದೆ ನೀಡುವಂತೆ ಒತ್ತಾಯಿಸಿದೆ. ಇದೇ ವೇಳೆ ಇತರ ಸಮುದಾಯದವರೂ ತಮ್ಮ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿವೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ರಾಜು ಸೇಠ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಸತೀಶ್ ಜಾರಕಿಹೊಳಿ ನಾಯಕ. ಅವರಿಗೆ ಹುದ್ದೆ ನೀಡಬೇಕು. ಬೆಳಗಾವಿಯ ಮಹಾ ಜನತೆ ನನಗೆ ಮತ ಹಾಕಿದ್ದಾರೆ ನಾನು ಸದಾ ಅವರಿಗೆ ಚಿರಋಣಿ. ಬೆಳಗಾವಿ ನಗರದಲ್ಲಿ ಕುಡಿಯುವ ನೀರು ರಸ್ತೆ ಕಾಮಗಾರಿ ಒಳಚರಂಡಿ ಅಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಮೊದಲ ಅದ್ಯೇತೆ ನೀಡಲಾಗುವುದು. ನಮ್ಮ ಸರ್ಕಾರ ನೀಡಿದಂತಹ ಗ್ಯಾರಂಟಿಗಳನ್ನು ಹಂತ ಹಂತವಾಗಿ ಆಶ್ವಾಸನೆಗಳನ್ನು ಈಡೇರಿಸುವದಾಗಿ ಭರವಸೆ ನೀಡಿದರು. ನಾನು ಬೆಳಗಾವಿ ಜನರ ಸೇವೆಗೆ ಸದಾ ಬದ್ದ ನಾಗಿದ್ದೆನೆ ಎಂದರು. ಹಿರಿಯ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಪಕ್ಷದ ವಿವೇಚನೆಗೆ ಬಿಟ್ಟ ವಿಚಾರ ಎಂದು ಸೇಠ್ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇಠ ಒತ್ತಾಯಿಸಿದ್ದಾರೆ.