ದೇಶ

ಖರ್ಗೆ ಅವರನ್ನು ಭೇಟಿಮಾಡಿದ ಬೆಳಗಾವಿ ಜಿಲ್ಲೆ ಶಾಸಕರು

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿ, ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಶಾಸಕರ ನಿಯೋಗದೊಂದಿಗೆ ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಸತೀಶ್‌ ಜಾರಕಿಹೊಳಿ ಅವರ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ವಿಧಾನ ಪರಿಷತ ಸದಸ್ಯರಾದ  ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಮಹಾಂತೇಶ ಕೌಜಲಗಿ, ಮಹೇಂದ್ರ ತಮ್ಮನ್ನವರ, ಅಸಿಫ್ (ರಾಜು) ಸೇಠ್ , ವಿಶ್ವಾಸ ವೈದ್ಯ ಅವರು ಉಪಸ್ಥಿತರಿದ್ದರು
TV24 News Desk
the authorTV24 News Desk

Leave a Reply