Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ಅನುಮಾನಾಸ್ಪದ ಯುವಕನ ಮೃತದೇಹ ಪತ್ತೆ 

ಅಥಣಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಎಕ್ಕಂಚಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.28 ವರ್ಷದ ಶಿವಪ್ಪ ಬಾಬು ಕಿವಾಡಿ ಎಂಬುವವರ ಮೃತದೇಹ ತೋಟದ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ  ಯುವಕನ ಶವ ಪತ್ತೆಯಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!