Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಧಾರವಾಡ

ಹಸೆಮಣೆ ಏರಬೇಕಿದ್ದ ಯುವಕನ ಕೊಲೆ

ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನನ್ನು ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದ ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕ.
ತಾವರಗೇರೆ ಗ್ರಾಮದ ಯುವತಿ ಜೊತೆ ಇದೇ 7ರಂದು ಮದುವೆ ನಿಶ್ಚಯವಾಗಿತ್ತು. ರಾತ್ರಿ ಮನೆಯಲ್ಲಿ ಊಟ ಮಾಡಿಕೊಂಡು ತೋಟದ ಮನೆಯಲ್ಲಿ ಮಲಗಲು ನಿಂಗಪ್ಪ ತೆರಳಿದ್ದಾರೆ.
ಮಧ್ಯರಾತ್ರಿ ತೋಟದ ಮನೆಗೆ ದುಷ್ಕರ್ಮಿಗಳು ನುಗ್ಗಿದ್ದಾರೆ. ನಿಂಗಪ್ಪ ಎಚ್ಚರಗೊಂಡು ಯಾರೆಂದು ಕೇಳುತ್ತಿದ್ದಂತೆ ಏಕಾಏಕಿ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕೈಗೊಂಡಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ನೆರೆಹೊರೆಯವರಿಂದ ಮಾಹಿತಿ ಪಡೆದುಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
TV24 News Desk
the authorTV24 News Desk

Leave a Reply

error: Content is protected !!