ರೈಲು ದುರಂತ ಸ್ಥಳಕ್ಕೆ ತೆರಳಿದ ಸಚಿವ ಸಂತೋಷ ಲಾಡ್…!
ಭುವನೇಶ್ವರ : ಇತ್ತೀಚಿನ ದಶಕಗಳಲ್ಲೇ ಅತೀ ದೊಡ್ಡ ದುರಂತ ಎಂದೇ ಹೇಳಲಾಗಿರುವ ಬೆಂಗಳೂರು-ಹೌರಾ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‍ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 300ಕ್ಕೆ ಏರಿಕೆಯಾಗಿದ್ದು, 1 ಸಾವಿರಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ವಾಯುಸೇನೆಯ ಹೆಲಿಕಾಪ್ಟರ್ ಗಳು ಕೂಡ ರಕ್ಷಣಾ ಕಾರ್ಯಾ ಚರಣೆಯಲ್ಲಿ ತೊಡಗಿವೆ. ರಾತ್ರಿಯಿಂದಲೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಮೀಪದ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಮೂರು ಎನ್‍ಡಿಆರ್‍ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬ್ಯುಲೆನ್ಸ್‍ಗಳನ್ನು ಘಟನಾ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ತಿಳಿಸಿದ್ದಾರೆ.
ಸ್ಥಳಕ್ಕೆ ಸಚಿವ ಸಂತೋಷ ಲಾಡ್…!
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.
ಘಟನೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಸಿದ್ದರಾಮಯ್ಯ ಅವರು, ವರದಿ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಸೂಚನೆ ನೀಡಿದರು.ಬಳಿಕ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಹಾಗೂ ಅವರ ಯೋಗಕ್ಷೇಮದ ಬಗ್ಗೆ ಅಗ್ಯ ನೇರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.