ಬೆಳಗಾವಿ

ರಾತೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ 

ಪ್ರತಿಮೆ ಪ್ರತಿಷ್ಠಾಪನೆ ಮಾಡಿದ ಹಿನ್ನಲೆಯಲ್ಲಿ ಮಚ್ಛೆ ಗ್ರಾಮದಲ್ಲಿ ಉದ್ವಿಗ್ನ  ಪರಸ್ಥಿತಿ
ಬೆಳಗಾವಿ :ಖಾನಾಪುರ ರಸ್ತೆಯಲ್ಲಿರುವ  ಮಚ್ಚೆ ಗ್ರಾಮದಲ್ಲಿ ಪಟ್ಟಣ ಪಂಚಾಯತ್ ಎದುರು ಸಂಗೋಳ್ಳಿ ರಾಯಣ್ಣ ಪ್ರತಿಷ್ಠಾಪನೆ ಮಾಡಿದ ಹಿನ್ನಲೆಯಲ್ಲಿ ಪರಸ್ಥಿತಿ ಉದ್ವಿಗ್ನ ಸ್ಥಿತಿಯಲ್ಲಿದ್ದು ಬೂದಿ ಮುಚ್ಚಿದ ಕೆಂಡದಂತೆ ಪರಸ್ಥಿತಿ ನಿರ್ಮಾಣವಾಗಿದೆ.
ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳ ಮನವಿ ಮಾಡಿದ್ದವು ಅದೇ ರೀತಿಯಾಗಿ ನಿನ್ನೆ ರಾತ್ರಿ ಪ್ರತಿಷ್ಠಾಪನೆ ಮಾಡಲಾಗಿದ್ದು ಜೀಜಾಮಾತಾ ಅಥವಾ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪಿಸಲು ಮನವಿ ಮಾಡಿದ್ದ ಮರಾಠಿ ಭಾಷಿಕರು
ಕನ್ನಡ ಭಾಷಿಕರ ಕೆಂಗಣ್ಣಿಗೆ ಗುರಿಯಾಗಿದೆಸಂಗೊಳ್ಳಿ ರಾಯಣ್ಣ ಮೂರ್ತಿ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜಮಾವಣೆಯಾಗಿದ್ದು ಯಾವುದೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕ್ರಮಕ್ಕೆ ಡಿಸಿಪಿ ಶೇಖರ್ ಹೆಚ್.ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ
ಒದಗಿಸಲಾಗಿದ್ದು ಸ್ಥಳಕ್ಕೆ ಆಗಮಿಸಿದ ಒಂದು ಕೆ ಎಸ್ ಆರ್ ಪಿ ತುಕಡಿ ನೀಯೊಜನೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
TV24 News Desk
the authorTV24 News Desk

Leave a Reply