Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಧಾರವಾಡ

ಹುಬ್ಬಳ್ಳಿಗೆ ಬಂತು ವಂದೇ ಭಾರತ್ ರೈಲು..! 

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್ ರೈಲು ಇಂಟರ್‌ಸಿಟಿ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ಸಮಿ-ಹೈಸ್ಪೀಡ್, ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ಟ್ರೈನ್ ಆಗಿದ್ದು,
ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಅವಳಿ ನಗರ  ಹುಬ್ಬಳ್ಳಿಗೆ ಆಗಮಿಸಿದೆ.
ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟಿದೆ. 9.58ಕ್ಕೆ ದಾವಣಗೆರೆ, 11-30ಕ್ಕೆ ಹುಬ್ಬಳ್ಳಿಗೆ ಬಂದು 11-35ಕ್ಕೆ ಧಾರವಾಡಕ್ಕೆ ಹೊರಡಲಿದೆ. ಮಧ್ಯಾಹ್ನ 1.15ಕ್ಕೆಪುನಃ ಧಾರವಾಡದಿಂದ ಪ್ರಯಾಣ ಬೆಳೆಸುವ ರೈಲು, 1.35ಕ್ಕೆ ಹುಬ್ಬಳ್ಳಿಗೆ, 3.48ಕ್ಕೆ ದಾವಣಗೆರೆಗೆ, ರಾತ್ರಿ 7.45ಕ್ಕೆ ಯಶವಂತಪುರಕ್ಕೆ ಬಂದು ರಾತ್ರಿ 8.10ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತಲುಪಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಸರೆನ್ಸ್ ಮೂಲಕ ಜೂನ್ 26ರಂದು ರೈಲು ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಅಧಿಕೃತವಾಗಿ ಓಡಾಟ ಆರಂಭಿಸಲಿದೆ.ಪೆರಂಬೂರಿನಲ್ಲಿರುವ ಚೆನ್ನೈ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಈ ರೈಲು ನಿರ್ಮಾಣಗೊಂಡಿದೆ. ಬೆಂಗಳೂರು-ಧಾರವಾಡದಅಂತರ 487 ಕಿಲೋಮೀಟರ್ ಇದ್ದು, ಸುಮಾರು ಏಳು ಗಂಟೆಗಳಲ್ಲಿ ಕ್ರಮಿಸಲಿದೆ. ಗಂಟೆಗೆ 160 ಕಿಲೋ ಮೀಟರ್ ವೇಗದ ಸಾಮರ್ಥ್ಯ ಇದ್ದರೂ ಈ ಮಾರ್ಗದಲ್ಲಿ ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ.
TV24 News Desk
the authorTV24 News Desk

Leave a Reply

error: Content is protected !!