ಬೆಳಗಾವಿ

ಪತ್ನಿ ಜೊತೆ ಪ್ರಿಯಕರನನ್ನು ಕೊಚ್ಚಿ ಕೊಂದ ಪತಿರಾಯ

ಅನೈತಿಕ  ಸಂಬಂಧ: ಡಬಲ್ ಮರ್ಡರ್ ಬೆಚ್ಚಿ ಬಿದ್ದ ಬೆಳಗಾವಿ ಜಿಲ್ಲೆ
ಬೆಳಗಾವಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಅಕ್ಕತಂಗೇರಹಾಳ ಗ್ರಾಮದ ರೇಣೂಕಾ ಯಲ್ಲಪ್ಪ ಮಾಳಗಿ (42) ಹಾಗೂ ಮಲ್ಲಿಕಾರ್ಜುನ ಜಗದಾರ (40) ಎಂಬವರು ಕೊಲೆಗೀಡಾಗಿದ್ದಾರೆ. ಕೊಲೆ ಮಾಡಿರುವ ರೇಣುಕಾಳ ಪತಿ ಯಲ್ಲಪ್ಪ ಮಾಳಗಿ (45) ಎಂಬಾತನನ್ನು ಬಂಧಿಸಲಾಗಿದೆ.
ಅಕ್ರಮ ಸಂಬಂಧ ಶಂಕಿಸಿ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಲ್ಲಿಕಾರ್ಜುನ ಮನೆ ಹೊರ ಭಾಗದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಅಂಕಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TV24 News Desk
the authorTV24 News Desk

Leave a Reply