ರಾಜ್ಯ

ಕರ್ನಾಟಕ ಬಜೆಟ್ 2023-24: ಸಂಪೂರ್ಣ ಮಾಹಿತಿ 

14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಐತಿಹಾಸಿಕ ದಾಖಲೆ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ 7ನೇ ಬಾರಿ ಬಜೆಟ್‌ ಮಂಡಿಸಿದ್ದಾರೆ. ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ಭರಪೂರ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ತೆರಿಗೆ ಸೋರಿಕೆ ತಡೆಯುವ ಜೊತೆಯಲ್ಲೇ ಮದ್ಯದ ತೆರಿಗೆ ಏರಿಕೆ ಮಾಡುವ ಮೂಲಕ ತೆರಿಗೆ ಸಂಗ್ರಹ ಗುರಿಯನ್ನೂ ಹೆಚ್ಚಿಸಲಾಗಿದೆ. ಸಿದ್ದರಾಮಯ್ಯ ಬಜೆಟ್‌ನ ಮುಖ್ಯಾಂಶಗಳು ಇಂತಿವೆ:
 
  • ಕರ್ನಾಟಕ ಬಜೆಟ್ 2023-24 ಗಾತ್ರ: 3 ಲಕ್ಷದ 27 ಸಾವಿರ ಕೋಟಿ ರೂ.
  •  
  • 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು
  •  
  • ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಏರಿಕೆ
  •  
  • ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ
  •  
  • ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ – ಡಿಕೆಶಿ ಖಾತೆಗೆ ಬಂಪರ್!
  •  
  • ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ
  •  
  • ಬೆಂಗಳೂರಿನ ಬೈಯ್ಯಪ್ಪನ ಹಳ್ಳಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಬಳಿ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ
  •  
  • ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ
  •  
  • ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ – ‘ಅನುಗ್ರಹ ಯೋಜನೆ’ ಮರು ಜಾರಿ
  •  
  • ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲು
  •  
  • ಎಪಿಎಂಸಿ ಕಾಯ್ದೆ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧಾರ
  •  
  • ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ
  •  
  • ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್
  •  
  • ‘ಕೃಷಿ ಭಾಗ್ಯ ಯೋಜನೆ’ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂ.
  •  
  • ಮೀನುಗಾರ ಮಹಿಳೆಯರಿಗೆ ನೀಡುವ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷಕ್ಕೆ ಏರಿಕೆ
  •  
  • ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆ ಉನ್ನತೀಕರಣ
  •  
  • ಕನಕಪುರ ತಾಲ್ಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು
  •  
  • ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
  •  
  • ಕಲಬುರಗಿಯಲ್ಲಿ ತಾಯಿ – ಮಗು ಆಸ್ಪತ್ರೆ ನಿರ್ಮಾಣ – 70 ಕೋಟಿ ರೂ. ವೆಚ್ಚ
  •  
  • ಹಿಂದಿನ ಸರ್ಕಾರದ ಪಠ್ಯ ಪರಿಷ್ಕರಣೆಗೆ ನಿರ್ಧಾರ: ಪರಿಷ್ಕರಣೆ ಮಾಡಿದ್ದ ಪಠ್ಯ ಕೈಬಿಡಲು ತೀರ್ಮಾನ
 
  • ಸರ್ಕಾರಿ, ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಣೆ
 
  • 1 ಲಕ್ಷದ 62 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
  •  
  • ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ
  •  
  • ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
  •  
  • ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
TV24 News Desk
the authorTV24 News Desk

Leave a Reply