ಬೆಳಗಾವಿ ನಗರದಲ್ಲಿ ಶುಕ್ರವಾರ ನಡೆದ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿ ನಾಲ್ಕು ಜನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ನಗರ ಘಟಕದ ಅಧ್ಯಕ್ಷ ಅನಿಲ್ ಬೆನಕೆ ಹೇಳಿದರು.
ಬೆಳಗಾವಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಚುನವಣೆಯ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಥೋತ್ರೆ, ವೀಣಾ ವಿಜಾಪುರೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಸವಿತಾ ಪಾಟೀಲ ಲೆಕ್ಕ ಪರಿಶೋಧನಾ ಇಲಾಖೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಲೋಕೋಪಯೋಗಿ ಇಲಾಖೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಾಣಿ ಜೋಶಿ ಆಯ್ಕೆಯಾಗಿದ್ದಾರೆ ಎಂದರು.
ಮಹಾನಗರ ಪಾಲಿಕೆಯ ಪರಂಪರೆಯನ್ನು ಇಟ್ಟುಕೊಂಡು ಅವಿರೋಧ ಆಯ್ಕೆ ಮಾಡಲಾಘಿದೆ. ಮುಂಬರುವ ದಿನಗಳಲ್ಲಿ ಮಹಾನಗರವನ್ನು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕೆಂದು ತಿಳಿಸಲಾಗಿದೆ ಎಂದರು.