ಬೆಳಗಾವಿ

ಬೆಳಗಾವಿ ಪೊಲೀಸ್ ಕಾನ್‌ಸ್ಟೇಬಲ್ ನೇಣಿಗೆ ಶರಣು 

ಬೆಳಗಾವಿ ಮೂಲದ ಪೊಲೀಸ್  ಕಾನ್ಸ್‌ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.
ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ ನೇಣಿಗೆ ಶರಣಾದ ಪೊಲೀಸ್ ಕಾನ್‌ಸ್ಟೇಬಲ್. ಆತ್ಮಹತ್ಯೆಗೆ ಕಾರಣ ಏನೆಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
TV24 News Desk
the authorTV24 News Desk

Leave a Reply