Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

 ನಮ್ಮ ಕುಟುಂಬದಿಂದಲೇ ಅಭ್ಯರ್ಥಿ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಪಕ್ಷ ಹೇಳಿದರೆ 2024 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಸಭೆ ನಡೆದಿದೆ. ಬೆಳಗಾವಿ ಜಿಲ್ಲೆಯ ಶಾಸಕರ ಜತೆ ಸಭೆ ನಡೆಸಿ ಚರ್ಚಿಸಿದ್ದೇನೆ. ಮುಂದಿನ 2 ತಿಂಗಳೊಳಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಮುಂದಿನ 2 ತಿಂಗಳೊಳಗೆ ಘೋಷಣೆಯಾಗಲಿದೆ. ಎರಡೂ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಸ್ಥಳೀಯ ಶಾಸಕರು, ಮುಖಂಡರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ನಮ್ಮ ಕುಟುಂಬ ಎರಡನೇ ಸ್ಥಾನದಲ್ಲಿ ಇರಲಿದೆ. ಪಕ್ಷ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೇಳಿದರೆ ನಿಲ್ಲುತ್ತೇನೆ. ಅವಶ್ಯಕತೆ ಇದ್ದರೆ ನಮ್ಮ ಕುಟುಂಬದಿಂದಲೇ ಅಭ್ಯರ್ಥಿ ನಿಲ್ಲಿಸುತ್ತೇವೆ ಎಂದರು.
TV24 News Desk
the authorTV24 News Desk

Leave a Reply

error: Content is protected !!