ರಾಜ್ಯ

ಶಕ್ತಿ ಯೋಜನೆ ವಿರೋಧಿಸಿ ಜುಲೈ 27ಕ್ಕೆ ಬಂದ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ನು ವಿರೋಧಿಸಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಜುಲೈ 27 ರಂದು ಬಂದ್ ಆಚರಿಸಲಿದೆ.
ರಾಜ್ಯ ಸರ್ಕಾರದ ಸೂಕ್ತ ಕ್ರಮ ಕೈಗೊಳ್ಳದೆ ಇರುವುದರಿಂದ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ಕಂಗಾಲಾಗಿದ್ದಾರೆ. ಜೊತೆಗೆ ಆಟೋರಿಕ್ಷಾಗಳಿಗೂ ಬಾಡಿಗೆ ಸಿಗುತ್ತಿಲ್ಲ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಗೆ ಮುಂದಾಗಿವೆ.
 
ಹೀಗಾಗಿ ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರ ವರೆಗೆ ಓಲಾ, ಉಬರ್, ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಸಂಚಾರ ಇರಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಎಂದು ಪತ್ರಿಕಾಗೋಷ್ಠಿಯಲ್ಲಿ ಖಾಸಗಿ ಬಸ್ ಮಾಲೀಕರ ಸಂಘದ ಎಸ್. ನಟರಾಜ್ ಶರ್ಮಾ ತಿಳಿಸಿದ್ದರು.
TV24 News Desk
the authorTV24 News Desk

Leave a Reply