ಬೆಳಗಾವಿ: ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ವರ್ಷಗಳು ಕಳೆಯುತ್ತಾ ಬಂದಿದೆ. ಆದರೆ, ಅಪ್ಪು ಇಲ್ಲ ಎಂಬ ಕೊರಗು ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಅವರನ್ನು ಪ್ರತಿ ಹೆಜ್ಜೆಯಲ್ಲೂ ನೆನಪಿಸಿಕೊಳ್ಳಲಾಗುತ್ತಿದೆ. ಹಲವು ಸಿನಿಮಾ ಕಾರ್ಯಕ್ರಮಗಳಲ್ಲಿ ಪುನೀತ್ಗೆ ಗೌರವ ಸೂಚಿಸಲಾಗುತ್ತದೆ. ಕಿರುತೆರೆ ಕಾರ್ಯಕ್ರಮಗಳಲ್ಲೂ ಅಪ್ಪು ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಅಪ್ಪುಗೆ ಭಿನ್ನ ರೀತಿಯಲ್ಲಿ ಗೌರವ ನೀಡಲಾಗಿದೆ. ಬುಧವಾರ ಜೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ನ ಪುನಿತರಾಜಕುಮಾರ ಟ್ರೋಫಿಯೊಂದಿಗೆ ರಿಯಾಲಿಟಿ ಶೋ ತಂಡ ಬೆಳಗಾವಿ ನಗರಕ್ಕೆ ಆಗಮಿಸಿದಾಗ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕನ್ನಡ ಹೋರಾಟಗಾರರು ಹಾಗು ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು.
tv24plus.in > Blog > ಜಿಲ್ಲೆ > ಬೆಳಗಾವಿ > ಪವರ್ ಸ್ಟಾರ್ ಟ್ರೋಫಿಗೆ ಬೆಳಗಾವಿಯಲ್ಲಿ ಪವರ್ ಫುಲ್ ಸ್ವಾಗತ