ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ವಿದ್ಯುತ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ.
ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು ಆಗಸ್ಟ್ 1 ರಿಂದಲೇ ಹೊಸ ದರ ಜಾರಿಯಾಗಲಿದೆ.