Warning: Trying to access array offset on false in /www/wwwroot/tv24plus.in/wp-content/plugins/newsmax-core/includes/core.php on line 87
ಬೆಳಗಾವಿ

ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಆಸ್ಪತ್ರೆಗೆ..! 

ಬೈಲಹೊಂಗಲ  ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಸೈನಿಕ 230 ಮಕ್ಕಳಿರುವ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಸಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಕ್ಕಳು ಚೇತರಿಸಿಕೊಂಡು ಮತ್ತೆ ಶಾಲೆಗೆ ತೆರಳಿದ್ದಾರೆ.
ಗುರುವಾರ ರಾತ್ರಿ ಪನೀರ್, ಚಿಕನ್ ಊಟ ನೀಡಲಾಗಿತ್ತು. ಊಟದ ನಂತರ ಮಕ್ಕಳು ಅಸ್ವಸ್ಥಗೊಂಡರು.
ವಿಷಯ ತಿಳಿದು ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ, ಪ್ರಭಾರಿ ತಹಶೀಲ್ದಾರ್ ಜೆ.ಸಿ. ಅಷ್ಠಗಿಮಠ, ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ಪಂಚಾಕ್ಷರಿ ಸಾಲಿಮಠ, ಕಂದಾಯ ನಿರೀಕ್ಷಕ ಸುರೇಶ ಮಾಳಗಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಊಟದ ವ್ಯವಸ್ಥಾಪಕ ಮತ್ತು ಪ್ರಾಚಾರ್ಯರನ್ನು ತರಾಟೆಗೆ ತೆಗೆದುಕೊಂಡರು. ಇನ್ನು ಮುಂದೆ ಗುಣಮಟ್ಟದ ಆಹಾರ ಪೂರೈಸುವಂತೆ ತಿಳಿಸಿದರು.
TV24 News Desk
the authorTV24 News Desk

Leave a Reply

error: Content is protected !!